Category: ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ಜೇನು ಮಲೆಯ ಹೆಣ್ಣು

‘ ನಿಚ್ಚಂ ಪೊಸತು’ ಆಯ್ದ ಸಂಗಂ ಕವಿತೆಗಳನ್ನು ಕನ್ನಡದಲ್ಲಿ ಓದುವಾಗ ಭಾಷೆ ಕೋಶಗಳನ್ನು ಮೀರಿದ ಕಾಲಮಾನಗಳನ್ನು ಮೀರಿದ ಅನುಭವವಾಯಿತು ಎಂದು ಕವಿಯೇ ಹೇಳಿದ್ದಾರೆ. ಅಂಥ ದಿವ್ಯತೆ ಇಲ್ಲಿನ ಶಬ್ದಗಳಲ್ಲಿ ಸೆರೆಯಾಗಿದೆ.

ನಿರುತ್ತರ

ಪುಸ್ತಕ ಸಂಗಾತಿ ಒಂದೇ ಗುಟುಕಿಗೆ ಅಮಲೇರುವ ಕಾವ್ಯ ಅರಿವಿನ ಹರಿಗೋಲು ಮೂಲಕ ಕಾವ್ಯದ ಪಯಣ ಆರಂಭಿಸಿದ ಕೆ‌.ಬಿ.ವೀರಲಿಂಗನಗೌಡರು ಹಲವು ಅಗ್ನಿದಿವ್ಯ ಗಳನ್ನು ದಾಟಿಕೊಂಡು ಬಂದಿರುವವರು ಸದ್ಯ ಸಾಸಿವೆಯೊಳಗೆ ಸಾಗರ ಕಾಣುವ ಅವರ ಕವಿತೆಗಳು ಹುಸಿ ಲೋಕದ ವರ್ತಮಾನದ ತಲ್ಲಣಗಳಿಗೆ ಮುಖಾಮುಖಿಯಾಗುತ್ತವೆ ಹೇಳುವ ಸಾಲು ಎರಡಾದರೂ ದೀರ್ಘ ಕವಿತೆಯ ಎಲ್ಲ ಕಸುವನ್ನು ಆ ಸಾಲುಗಳಲ್ಲಿ ತುಂಬಿದ್ದಾರೆ, ಅಕ್ಕನಿಗೆ ಚನ್ನಮಲ್ಲಿಕಾರ್ಜುನನಂತೆ ,ಕೆ.ಬಿ ಅವರು ‘ಸಾಕಿ’ ಎನ್ನುವ ತಮ್ಮ ಆತ್ಮಸಂಗಾತದ ದನಿಯನ್ನು ನಿವೇದಿಸಿಕೊಳ್ಳುವ ಮುಖೇನ ಲೋಕಕ್ಕೆ ಹೇಳಬೇಕಾದ ಎಲ್ಲ ಸಂಕಟಗಳ ದ್ರವ್ಯ […]

ಸಲೀಂ ಅವರ ಕಥೆಗಳು

ಇದು ನನಸಾಗುವ ಕನಸೆಂಬುದು ಕವಿ, ಕಥೆಗಾರರ ಭಾವನೆಯಾಗಿದೆ. ಭಾಷೆ, ಧರ್ಮಗಳ ಸರಿ ಪ್ರಜ್ಞೆ ಇರುವವರ ಹೃದಯ ಮಿಡಿತವಾಗಿದೆ. ಈ ಭಾವನೆಗಳು ವಸ್ತುವಾಗುಳ್ಳ ಭಾರತೀಯ ಭಾಷೆಗಳಲ್ಲಿನ ಕಥೆಗಳನ್ನು ಸಂಕಲಿಸಿದರೆ ಅನೇಕ ಸಂಪುಟಗಳು ನಮಗೆ ಸಿಗುತ್ತದೆ. ಈ ನಿಟ್ಟಿನ ಚಲನೆಯಲ್ಲಿ ತೆಲುಗು ಕಥೆಗಳು ನಮ್ಮ ಮುಂದೆ ತೆರೆದುಕೊಳ್ಳುತ್ತವೆ.

ಹಾವೇರಿಯಾಂವ್

ಪುಸ್ತಕ ಸಂಗಾತಿ ಹಾವೇರಿಯಾಂವ್ ದ್ವೇಷ, ಅಸೂಯೆಗಳಿಲ್ಲದೆ ಜೀವನ ಪ್ರೀತಿ ತೋರಿಸುವ ‘ಹಾವೇರಿಯಾಂವ್’ ವನ್ಯಜೀವಿ ಛಾಯಾಗ್ರಾಹಕ, ಕವಿಯೂ ಆಗಿರುವ ಮಾಲತೇಶ ಅಂಗೂರ ಮೂರು ದಶಕಗಳಿಂದ ಹಾವೇರಿಯಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಇತ್ತೀಚಿಗೆ ತಮ್ಮ ಅಂಕಣ ಬರಹಗಳ “ಹಾವೇರಿಯಾಂವ್’’ ಪುಸ್ತಕ ಹೊರ ತಂದಿದ್ದಾರೆ. ಟಿ.ಕೆ.ತ್ಯಾಗರಾಜರ ಸಂಪಾದಕತ್ವದಲ್ಲಿ ಬರುತ್ತಿದ್ದ ‘ಡೆಕ್ಕನ್ ನ್ಯೂಸ್’ ಪತ್ರಿಕೆಯಲ್ಲಿ ಪ್ರಕಟಿಸುತ್ತಿದ್ದ ‘ಕಾಕಾ ಕಾಲಮ್’ ಅಂಕಣ ಬರಹಗಳ ಸಂಕಲನವೇ ಈ ‘ಹಾವೇರಿಯಾಂವ್’. ಈ ಸಂಕಲನದಲ್ಲಿ ಒಟ್ಟು ೪೪ ಲೇಖನಗಳಿವೆ. ನಮ್ಮ ಸಮಾಜದ ಅಂಕುಡೊಂಕುಗಳನ್ನು ಜನರೆದುರು ತೆರೆದಿಡಲು ತಮ್ಮದೇ […]

ಸಮಯಾಂತರ

ಪುಸ್ತಕ ಸಂಗಾತಿ ಸಮಯಾಂತರ ಕನಸುಗಾರರು ಬರಲಿ ನಾವೂ ಸೋತ ಆಟವನ್ನು ಗೆದ್ದು ತರಲಿ ಅವರು- ಸಮಯಾಂತರ ಕಟ್ಟುವ ಕವಿ, ಕನ್ನಡದ ಕಾವ್ಯದೆಗಳನ್ನು ಮುಟ್ಟಿದ,ನಮ್ಮ ಅಂತರಾಳವನ್ನು ತಟ್ಟುವ,ಕವಿ ಸತೀಶ ಕುಲಕರ್ಣಿ ಅವರ ಆಯ್ದ ಕವಿತೆಗಳ ಸಂಕಲನ ‘ಸಮಯಾಂತರ’ ಮೊಗಸಾಲೆ ಪ್ರಕಾಶನದಲ್ಲಿ ಪ್ರಕಟವಾದ -೨೦೧೩ ಕೃತಿ ಹಲವೂ ಗಟ್ಟಿ ಕವಿತೆಗಳ ಗುಚ್ಛ “ರಕ್ತಗಾಲಿನ ನಮ್ಮಪಾಲಿನ/ ಹಾಡ ಬರೆಯತೇವ /ನೆಲಕ ಹಾಡ ಬರೆಯತೇವ ಎನ್ನುತ್ತಲೆ ಸತೀಶರು ನೆಲದ ಜನರ ನಾಡಿ ಮಿಡಿತದಿಂದ ರೂಪುಗೊಂಡು ಕಾವ್ಯ ನೆಲಕೆ ಸಂಕಟವೊದಗಿದಾಗ ಸತೀಶರ ಕಾವ್ಯ ಹೋರಾಟದ […]

ಮರುಭೂಮಿಯ ಹೂ’ ಸಫಾ’

ಹಳೆಯ ಧೂಳು ಹಿಡಿದ ಅಥವಾ ತುಕ್ಕು ಹಿಡಿದ ರೇಜರ್ ಬ್ಲೇಡಿನಿಂದ ಹೆಣ್ಣಿನ ಗುಪ್ತಾಂಗದ ಕ್ಲಿಟೋರಸ್ ಎಂಬ ಬಹುಮುಖ್ಯವಾದ ಭಾಗವನ್ನು ಅನಸ್ತೇಸಿಯಾಗಳ ಸಹಾಯವಿಲ್ಲದೆಯೇ ತೆಗೆದು ಕತ್ತರಿಸಿ ಹಾಕಿ ಪೊದೆಗಳಿಂದ ತೆಗೆದ ಮುಳ್ಳುಗಳಿಂದ ಹಸಿಯಾದ ಗಾಯವನ್ನು ಮುಚ್ಚಿ ಹೊಲಿಯುವ ಬರ್ಬರ ಸಂಪ್ರದಾಯ.

ದುಗುಡದ ಕೆಂಡ – ಕೈಲಿ ಹಿಡಿದು

ಪುಸ್ತಕ ಸಂಗಾತಿ ದುಗುಡದ ಕೆಂಡ – ಕೈಲಿ ಹಿಡಿದು ರಾಯಬಾಗದ ಯುವ ಕವಿ‌ ಮಿತ್ರ ರಾಜು ಸನದಿಯವರ ಕವನಸಂಕಲನ “ದುಗುಡದ ಕುಂಡ ಕೈಲಿ ಹಿಡಿದು ಕಾವ್ಯ ಪ್ರೀತಿಯ ಸಂಭ್ರಮ ಸಂತೋಷ ಅನುಭವಿಸುತ್ತ ಈ ಕೆಲವು‌ ಮಾತುಗಳನ್ನು ಬರೆಯುತ್ತಿದ್ದೇನೆ. ( ಸನದಿ ಪ್ರಕಾಶನ ರಾಯಬಾಗ -೨೦೧೯) ಈ ಸಂಕಲನ ಕರ್ನಾಟಕ ಸರ್ಕಾರದ ಕನ್ನಡ ಪುಸ್ತಕಪ್ರಾಧಿಕಾರದ ಧನ ಸಹಾಯ ಪಡೆದು ಮುದ್ರಣವಾಗಿರುವದೂ ವಿಶೇಷವೇ.ಹೊಸ ಕಾಲದ ಕವಿಗಳ ಕವಿತೆಗಳನ್ನು ಓದುವದೇ ಒಂದು ಸೊಗಸು. ಬರುತ್ತಿರುವ ಕವನ ಸಂಕಲನಗಳಿಗೇನೂ ಬರವಿಲ್ಲ. ಆದರೆ ಎದೆಯ […]

ತುಂಡು ರೊಟ್ಟಿ

ಪುಸ್ತಕ ಸಂಗಾತಿ ವರ್ತಮಾನಕ್ಕೆ ಮುಖಾಮುಖಿಯಾಗುವ ಪ್ರತಿಭಟನಾತ್ಮಕ ಕಾವ್ಯ ಜ.೩೧ ಶಿಗ್ಗಾವಿಯಲ್ಲಿದ್ದೆ. ಕನಕ ಶರೀಫ ಪ್ರಶಸ್ತಿ ಪ್ರದಾನ, ಕವಿಗೋಷ್ಠಿ, ಪುಸ್ತಕ ಬಿಡುಗಡೆ ಹೀಗೆ ಮೂರು ಆಯಾಮಗಳ ಸಮಾರಂಭವನ್ನು ಉತ್ತರ ಸಾಹಿತ್ಯ ವೇದಿಕೆ ಹಾಗೂ ನೇತಾಜಿ ಪ್ರಕಾಶನದವರು, ಗೆಳೆಯ ರಂಜಾನ್ ಕಿಲ್ಲೆದಾರ ಏರ್ಪಡಿಸಿದ್ದರು. ಈ ಕಾರ್ಯಕ್ರಮದಲ್ಲಿ ಕವನ ವಾಚನದ ನೆಪದಲ್ಲಿ ಶಿಗ್ಗಾಂವ್ ತಲುಪಿದ್ದೆ. ಅಲ್ಲಿದ್ದ ಗೆಳೆಯ ಅಲ್ಲಾಗಿರಿರಾಜ್ ಕನಕಗಿರಿ” ಸರ್ಕಾರ ರೊಕ್ಕ ಮುದ್ರಿಸಬಹುದು,ತುಂಡು ರೊಟ್ಟಿಯನ್ನಲ್ಲ .. ” ಎಂಬ ಅವರ ಕವನ ಸಂಕಲನವನ್ನು ನನ್ನ ಕೈಗಿಟ್ಟರು‌ . ಆ ಸಂಕಲನದ […]

ಪರಿಮಳದ ಹನಿಗಳು

ಪುಸ್ತಕ ಸಂಗಾತಿ ಪರಿಮಳದ ಹನಿಗಳು “ಸಖ ಸತ್ತ ಹೃದಯ ಮಸಣ ಸೇರಿತು ನಿನ್ನ ಕುಡಿಮೀಸೆಯ ಕುಂಚ ದಿಂದ ತುಟಿಯ ಮಾಸ್ತಿಗಲ್ಲಿಗೆ ಹೆಸರು ಬರೆದುಬಿಡು ಭಗ್ನ ಪ್ರೇಮಿಗಳು ಅಧ್ಯಯನಕ್ಕೆ ಬರುತ್ತಾರೆ”. ಇದು ಎ. ಎಸ್. ಮಕಾನದಾರ ಅವರ “ಪ್ಯಾರಿ ಪದ್ಯ” ಹನಿಗವನ ಸಂಕಲನದ ಒಂದು ಹನಿ. “ ಮನಸ್ಸಿನ ಆಳದಲ್ಲಿ ಮುದಿವಯಸ್ಸಿನವರಿಗಿಂತ ಯುವ ಜನರೇ ಹೆಚ್ಚು ಏಕಾಂಗಿತನವನ್ನು ಅನುಭವಿಸುತ್ತಾರೆ” ಅನ್ನೋ  ಮಾತಿದೆ. ಆ ಏಕಾಂತಕ್ಕೆ ಸಂಗಾತಿಯೇ ಕವಿತೆ.  ಇಲ್ಲಿರುವ ಹನಿಗವನಗಳು ಪ್ರೀತಿ, ಪ್ರೇಮ ವಿರಹ ಹಾಗೂ ಶೋಷಣೆಯ ವಿರುದ್ಧ […]

Back To Top