Author: admin

ಕಾವ್ಯಯಾನ

ಗಾಯಗಳ ಎಣಿಸುತ್ತಲೇ! ದೀಪಾಜಿ ಮಾತಿಗೊಮ್ಮೆ ತುಟಿಕಚ್ಚಿ  ಹೀಗೆಂದರೆ ಎಲ್ಲಿ ಬಿಟ್ಟು ಹೋದಾನೊ ಹಾಗೆಂದರೆ ಎಲ್ಲಿ ಬಿಟ್ಟು ಹೋದಾನೊ ಎಂಬ ದುಗುಡದಲ್ಲೆ ಕಳೆದೆ ಅಷ್ಟು ದಿನಗಳನ್ನ.. ಹೆಜ್ಜೆ ಹೆಜ್ಜೆಗೊಮ್ಮೆ ಹೆಜ್ಜೇನು ಸುರಿದು ಬಾಯಿಗೆ ಸೆರಗ ಒತ್ತಿ ದುಃಖ ಉಮ್ಮಳಿಸಿದಾ -ಗೆಲ್ಲ ಹುಸಿ ನಗುವನ್ನೆ ಹೊರಚೆಲ್ಲಿ ನೋವೆಲ್ಲ ಪಕ್ಕಡಿಗೆ ಸರಿಸುತ್ತಲೆ ಕಳೆದೆ ಅಷ್ಟು ದಿನಗಳನ್ನ.. ಉಸಿರು ಬಿಟ್ಟುರು ಸಾಕು ಹೆಡೆಎತ್ತಿ ಬುಸುಗುಡುತ್ತೀ ಪ್ರೇಮ ಸರಸ ಸಮರಸ ಕಲ್ಪಸಿದವಳಿಗೆ ಸಿಕ್ಕಿದ್ದು ಬರಿಯ ಹಾಲಾಹಲ ನಿನ್ನ ಸಿಟ್ಟುರಿಯ ಹರಿವು ಅಸಮಾಧಾ -ನದ ಕೋಲಾಹಲ […]

ಕಾವ್ಯಯಾನ

ತಂತಿಯೊಳಗಣ  ಶಬ್ದ ! ಬಿದಲೋಟಿ ರಂಗನಾಥ್ ನಾನು ಶರಾಬಿನ ದಾಸ ಘಟಶೋಧನೆಯಲ್ಲಿನ ಬಂಧವನ್ನು ಹುಡುಕುತ್ತಲೇ ಹೋದೆ ಅವನ ನೆರಳಿತ್ತು ಅವಳ ಒಲವಿತ್ತು ನಾನೇ ಇರಲಿಲ್ಲ. ಶೋಧಿಸಿಸಲು ಎದೆಗೂಡಲ್ಲಿದ್ದ ಹಂಸದ ನಡಿಗೆಯ ಹೆಜ್ಜೆಯ ಸುತ್ತಿ ಹೊಲೆದ ಪಾಪದ ಮೂಟೆಯ. ತಿರುಗಿದೆ ಕಾಡು –ಮೇಡು ಬೆಟ್ಟ ಕಣಿವೆ ಕಂದರ ನಾ ಬಯಸಿದ್ದು ಸಿಗಲಿಲ್ಲ ಧ್ಯಾನದ ಹೆಜ್ಜೆ ಮುಟ್ಟಿ ನೋಡಿದೆ ಸಕಲವೂ ನನ್ನೊಳಗೇ ಇತ್ತು ತಂತಿ ಮೀಟಿದ ಶಬ್ದ ನಿಜದ ನೆಲೆಯ ಬದುಕಿಗೆ ದಾರಿ ತೋರಿ ಬಯಲ ಪದಗಳು ಮುತ್ತಿದವು  ಎದೆಯ […]

ಲೇಖನ

ಆ ದೃಶ್ಯಗಳನ್ನು ಅಲಂಕರಿಸಿ ಹಂಚುತ್ತಿದ್ದಾರೆ! ಪಿಎಂ ಇಕ್ಬಾಲ್ ಕೈರಂಗಳ ಕೆಲವು ದೌರ್ಜನ್ಯದ ವಾರ್ತೆಗಳು, ವೀಡಿಯೋಗಳು FB ಮತ್ತು ವಾಟ್ಸಪಲ್ಲಿ ಷೇರು ಆಗಿ ನಮ್ಮ ಕಣ್ಣಿಗೆ ಬೀಳುತ್ತಿರುವುತ್ತವೆ. ನೋಡಕ್ಕಾಗದೇ ನೋಡುತ್ತೇವೆ. ಆಗೆಲ್ಲಾ ಮನಸ್ಸು ವಿಪರೀತ ಹರ್ಟುಗೊಳ್ಳುತ್ತದೆ. ಹೃದಯವನ್ನು ಯಾರೋ ಹಿಂಡಿದಂತಾಗುತ್ತದೆ. ಕೆಲವು ನಮ್ಮನ್ನು ಅಳಿಸಿಯೇ ಬಿಡುತ್ತವೆ. ವಿಕೃತ ಮನಸ್ಸಿನ ಪೈಶಾಚಿಕ ಮನುಷ್ಯರ ವಿರುದ್ಧ ರಕ್ತ ಕುದಿಯುತ್ತದೆ. ಅವರನ್ನು ಜೀವಂತ ಸುಡಬೇಕೆಂದು ಅನಿಸುತ್ತದೆ. ಕ್ರೌರ್ಯ, ದೌರ್ಜನ್ಯಗಳ ತಾಕತ್ತೇ ಹಾಗೆ. ಒಂದೆರಡು ನಿಮಿಷದ ವಾರ್ತೆಯಾಗಿ ಅಥವಾ ವೀಡಿಯೋ ಆಗಿ ಸಿಕ್ಕರೆ ನಮಗೆ […]

ಕಾವ್ಯಯಾನ

ಹೊಸ ಹಾಡು ದೇವಯಾನಿ ನೆನಪಿಗೆಂದು ಕೊಳಲ ನಾನೆಂದೂ ಕೇಳಲೇ ಇಲ್ಲ ಚಕ್ರ ಹಿಡಿಯಲೆಂದೇ ಹೊರಟವನು ನೀನು , ಕೊಳಲು ಬೇಕಿರಲಿಲ್ಲ ಏನು ಮಾಡಲಿ ಈ ಕೊಳಲ ಗಾಳಿ ನುಸುಳಿದರೂ ರಾಧೆ ರಾಧೇ ಎಂದೇ ಉಲಿಯುತ್ತಿದ್ದ ಕೊಳಲೀಗ ಬರಿ ಬಿದಿರ ಕೊಳವೆಯಾಗಿ ಬಿದ್ದಿದೆ ನೀನು ಕೊಳಲೂದಲೆಂದೇ ಗೋಕುಲಕೆ ಈ ಜಗಕೆ ಬರಲಿಲ್ಲ ಬಿಡು ಆದರೂ ಚಕ್ರ ಹೊತ್ತ ಕೈ ಸೋತಾಗ ಕೊಳಲ ನೆನಪಾಗದ್ದೇ ನನಗೆ ವಿಸ್ಮಯ ಕೊಳಲೆಂದರೆ ರಾಧೆ ಎಂದುಕೊಂಡಿದ್ದೆ ಎಂದು ಹೆಮ್ಮೆ ಪಡುತ್ತಿದ್ದೆ ನಾನು ಕೊಳಲ ತೊರೆದಷ್ಟೇ […]

ಪುಸ್ತಕ ಸಂಭ್ರಮ

ಪುಸ್ತಕ ಬಿಡುಗಡೆ ಕಾವ್ಯಕಂದೀಲು ಬಳಗ,ಬಾಗಲಕೋಟೆ ಹಾಗೂ ಕನ್ನಡಸಾಹಿತ್ಯಪರಿಷತ್ತು,ಬಾಗಲಕೋಟೆ ಹಾಗೂ ಫೀನಿಕ್ಸ್ ಪ್ರಕಾಶನ’_ ತೀರ್ಥಹಳ್ಳಿ,  ಇವರುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕ;20/10/2019ರಬಾನುವಾರ ಬಾಗಲಕೋಟೆಯ  ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಕನ್ನಡ ಸಾಹಿತ್ಯ ಲೋಕದ ಎರಡು  ಹೊಸ ಪುಸ್ತಕಗಳೂ ಲೋಕಾರ್ಪಣೆಗೊಂಡವು ‘ನವಿಲೂರ _ದಾರಿಯಲ್ಲಿ’ (ಕಥಾಸಂಕಲನ)- ಶ್ರೀಹರಿದೂಪದ  ‘ತೊರೆದು ಜೀವಿದಬಹುದೆ?’(ಭಾವಲಹರಿಗಳ ಗುಚ್ಛ)-ಪುನರ್ವಸು ಪ್ರಶಾಂತ್         

ಪ್ರಬಂದ

ಮನೆಯ ತಿಂಡಿ ಶ್ರೀದೇವಿ ಕೆರೆಮನೆ                           ಶಾಲೆಯಿಂದ ಬರುವಾಗಲೇ ಮಕ್ಕಳು ಮುಖ ಉಬ್ಬಿಸಿ ಬಂದಿದ್ದರು. ಕೇಳಿದ್ದಕ್ಕೆ ಉತ್ತರವಿಲ್ಲ. ನಾನೇನೋ ಅವರಿಗೆ ಅಹಿತವಾದ್ದೇನೋ ಮಾಡಿದ್ದೇನೊ ಎಂಬ ಭಾವನೆ ಅವರಿಬ್ಬರ ಮುಖದಲ್ಲಿ.  ಕೊನೆಗೆ ನಾನು “ ಏನಾದರೂ ಮಾಡಿಕೊಳ್ಳಿ. ನೀವು ಮಾತನಾಡದಿದ್ದರೆ ನನಗೆ ಆರಾಮ ಆಯ್ತು. ಹಾಯಾಗಿ ಇರ್ತೇನೆ” ಎಂದು ನನ್ನ ಪಾಡಿಗೆ ನಾನು ನನ್ನ ಕೆಲಸದಲ್ಲಿ ನಿರತಳಾದೆ. ಕೊನೆಗೂ ಚಿಕ್ಕವನು ಶಾಲೆಯಿಂದ ತಂದ ಚಿಕ್ಕ ಚೀಟಿಯೊಂದನ್ನು ನೀಡಿದ. ‘ಮಕ್ಕಳಿಗೆ ಮನೆಯಲ್ಲಿಯೇ ಮಾಡಿದ ತಿಂಡಿಯನ್ನು ಹಾಕಿ ಕೊಡಬೇಕು. ಹೊರಗಿನ ತಿಂಡಿಯನ್ನು […]

ಮೀನು ಶಿಕಾರಿಯ ಸಂಭ್ರಮ

ಮಳೆಗಾಲದ ಆರಂಭ ಮತ್ತು ಮೀನು ಶಿಕಾರಿ… ರಮೇಶ್ ನೆಲ್ಲಿಸರ ‘ಮಳ್ಗಾಲ ಅನ್ನೋದ್ ಯಾವಾಗ್ ಬಂದ್ ಈ ಸುಡ್ಗಾಡ್ ಶೆಕೀನ ಹೊತ್ಕಂಡ್ ಹೋಯ್ತದೋ ಆ ದ್ಯಾವ್ರೆ ಬಲ್ಲ’, ಅಂತ ಬೇಸ್ಗೀಲಿ ಹಾಗೇಯ “ಈ ಹಾಳಾದ್ ಮಳಿ ದಸೇಂದ್ ಮನೆ ಹೊರ್ಗ್ ಕಾಲಿಡಕ್ ಆಗ್ದು” ಅಂತ ಮಳ್ಗಾಲದಾಗೆ , ಈ ಬಗೀ ಮಾತು ನಮ್ ಮಲ್ನಾಡ್ ಕಡೆ ಎಲ್ರೂ ನಾಲ್ಗಿ ಮೇಲೂ ನಲೀತರ‌್ದದೆ. ಏನ್ ಶೆಕಿ ಅಂತೀರಾ, ಹೋದ್ ಮಳ್ಗಾಲ‌್ದಲ್ ಆ ನಮೂನಿ ಮಳೆ ಹೊಯ್ದ್ರು ನೀರ್ ಅನ್ನದ್ ಪಾತಾಳ್‌ಮಟ […]

ಮಕ್ಕಳ ಸಾಹಿತ್ಯ

ಮತ್ತೆ ಶಾಲೆ ಶುರುವಾಯಿತು ಸಿಂಧು ಬಾರ್ಗವ್ ದಸರ ಮುಗಿಯಿತು, ಶಾಲೆ ಶುರುವಾಯಿತು ಪುಟ್ಟಿಗೆ ಮಾತ್ರ ಮನಸಿಲ್ಲ, ರಜೆಯ ಗುಂಗು ಹೋಗಿಲ್ಲ ಪಾಠೀಚೀಲ ಎಲ್ಲಿದೆಯಮ್ಮ ಪುಸ್ತಕಗಳು ಕಾಣದಮ್ಮ ಪೆನ್ಸಿಲ್ ರಬ್ಬರ್ ಬೇಕು ಅಮ್ಮ ಅಂಗಡಿಗೆ ಹೋಗಿ ತರಬೇಕಮ್ಮ!! ಅಜ್ಜಿ ಮನೆಯು ಮಜವಾಗಿತ್ತು ಗೆಳೆಯರ ಜೊತೆಯಲಿ ಆಟವು ಇತ್ತು ಬಗೆಬಗೆ ಹಣ್ಣುಗಳ ಸವಿಯು ಇತ್ತು ಅಜ್ಜಿಯ ಕೈರುಚಿ ಸೊಗಸಾಗಿತ್ತು!! ಹೋಮ್ ವರ್ಕ್ ತುಂಬಾ ಕೊಟ್ಟಿಹರಮ್ಮ ಇನ್ನೂ ಬರೆದು ಮುಗಿದಿಲ್ಲಮ್ಮ ಮಿಸ್ಸು ಬೈದರೆ ಏನು ಮಾಡಲಿ? ತಲೆಕೆಳ ಮಾಡಿ ನಾನು ನಿಲ್ಲಲೇ!? […]

ಕಾವ್ಯಯಾನ

ಹೇಳಿ ಹೋಗು ಕಾರಣ ಸಂಗೀತ ಶ್ರೀಕಾಂತ್ ನುಡಿವೊಮ್ಮೆ ನಲ್ಲ ನಿನ್ನ ಕೊಳಲ!! ಕೊರಳ ಮಧುರ ಭಾವ ಹೊರಬರಲಿ.. ಎದೆಯೊಳಗಿರುವ ನಂಜು- ನೋವುಗಳೆಲ್ಲಾ ಹಾಡಾಗಿ ಹೊರ ಬಂದು ಕೇಳುವಂತಾಗಲಿ…. ಭಾವಧ್ಯುಯ್ಯಲೆಯಲಿ ಬದುಕಾ ದುಡುತ್ತಿರುವಾಗ ಅದನ್ನು ಧಿಕ್ಕರಿಸುತ್ತೆನೆಂಬುದು ಎಂಥ ಮೂರ್ಖತನವಾದಿತು? ನಿರ್ಭಾವದಲಿ ನಿಜವ ಕೊಲ್ಲ ಹೊರಟಿರುವುದೇಕೆ? ಬೆರಗಾಗಿದ್ದೆ ಹಿಂದೊಮ್ಮೆ ಬಂಡೆಗಳ ಮೇಲೂ ಚಿಗುರೊಡೆಯಬಲ್ಲೆ ಎಂಬ ಅದಮ್ಯ ಉತ್ಸಾಹಕ್ಕೆ ಜಗತ್ತನ್ನೆದುರಿಸಿ ನೆಡೆಯುತ್ತಿದ್ದ ನಿರ್ಭಿತ ನೆಡೆಗೆ.. ವಿರಹದ ದಳ್ಳುರಿಯ ದಾವನಲದಲ್ಲಿ ನಾ ಬೆಂದು ಬಸವಳಿಯುತ್ತಿರುವಾಗ ಬಂಧನ- ಬಿಡುಗಡೆ, ವಿರಹ- ವಿದಾಯ ಎಂಬೆಲ್ಲ ಅರ್ಥವಿರದ […]

ಲಹರಿ

ಒಮ್ಮೆ ತಿರುಗಿ ನೋಡು ನನ್ನ ಕೊನೆಯ ತಿರುವು ಬರುವ ಮುನ್ನ. ವಿಷ್ಣು ಭಟ್ ಹೊಸ್ಮನೆ ನನ್ನ ಮನಸ್ಸು ಅವಳು ತಿರುಗಿ ನೋಡಲೇಬಾರದು. ಮುಂದೆ ಎಂದಿಗೂ ಸಂಧಿಸದ ಹಾದಿಯಲ್ಲಿ ನಾನು ಮತ್ತು ಅವಳು ಸಾಗುತ್ತ ಇರಬೇಕು ಅಂದುಕೊಂಡಿತ್ತು. ಅವತ್ತು ತಿರುಗಿ ನೋಡದೇ ಹೋದರೂ ಎರಡು ದಿನ ಬಿಟ್ಟು ಮತ್ತೆ ಅವಳು ಬಂದಿದ್ದಳು. ಅವಳನ್ನು ಮತ್ತೆ ನೋಡಿದೆ ಎಂಬೊಂದು ಖುಷಿ ಬಿಟ್ಟರೆ ಮತ್ತೇನೂ ನನ್ನಲ್ಲಿ ಹುಟ್ಟಲಿಲ್ಲ. ಆದರೆ ಅವಳು ಎದೆ ತುಂಬ ಪ್ರೀತಿಯನ್ನು ಹೊತ್ತು ತಂದಿದ್ದಳು. ಅವಳು ಕಾದುಕಾದು ಕೇಳಿದ್ದು […]

Back To Top